ಭಾನುವಾರ, ಏಪ್ರಿಲ್ 25, 2021

ಮೂಲಶ್ಲೋಕ-ತೃತೀಯೋಽಧ್ಯಾಯಃ

 

ಮೂಲಶ್ಲೋಕ-ತೃತೀಯೋಽಧ್ಯಾಯಃ

 

̐

ಯ ಏಕೋ ಜಾಲವಾನೀಶತ ಈಶನೀಭಿಃ ಸರ್ವಾ̐ಲ್ಲೋಕಾನೀಶತ ಈಶನೀಭಿಃ .

ಯ ಏವೈಕ ಉದ್ಭವೇ ಸಮ್ಭವೇ ಚ  ಯ ಏತದ್ ವಿದುರಮೃತಾಸ್ತೇ ಭವನ್ತಿ ೦೩.೦೧

 

ಏಕೋ ಹಿ ರುದ್ರೋ ನ ದ್ವಿತೀಯಾಯ ತಸ್ಥುರ್ಯ್ಯ ಇಮಾ̐ಲ್ಲೋಕಾನೀಶತ ಈಶನೀಭಿಃ

ಪ್ರತ್ಯಙ್ಜನಾಸ್ತಿಷ್ಠತಿ ಸಞ್ಚುಕೋಚಾನ್ತಕಾಲೇ  ಸಂಸೃಜ್ಯ ವಿಶ್ವಾ ಭುವನಾನಿ ಗೋಪಾಃ ೦೩.೦೨

 

ವಿಶ್ವತಶ್ಚಕ್ಷುರುತ ವಿಶ್ವತೋಮುಖೋ  ವಿಶ್ವತೋಬಾಹುರುತ ವಿಶ್ವತಸ್ಪಾತ್

ಸಂ ಬಾಹುಭ್ಯಾಂ ನ(ಧ)ಮತಿ ಸಂಪತತ್ರೈರ್ದ್ದ್ಯಾವಾ ಪೃಥಿವೀ(ಭೂಮೀ) ಜನಯನ್ ದೇವ ಏಕಃ ೦೩.೦೩

 

ಯೋ ದೇವಾನಾಂ ಪ್ರಭವಶ್ಚೋದ್ಭವಶ್ಚ ವಿಶ್ವಾಧಿಪೋ ರುದ್ರೋ ಮಹರ್ಷಿಃ

ಹಿರಣ್ಯಗರ್ಭಂ ಜನಯಾಮಾಸ ಪೂರ್ವಂ ಸ ನೋ ಬುದ್ಧ್ಯಾ ಶುಭಯಾ ಸಂಯುನಕ್ತು ೦೩.೦೪

 

ಯಾ ತೇ ರುದ್ರ ಶಿವಾ ತನೂರಘೋರಾಪಾಪಕಾಶಿನೀ

ತಯಾ ನಸ್ತನುವಾ ಶಂತಮಯಾ ಗಿರಿಶನ್ತಾಭಿಚಾಕಶೀಹಿ ೦೩.೦೫

 

ಯಾಮಿಷುಂ ಗಿರಿಶಂತ ಹಸ್ತೇ ಬಿಭರ್ಷ್ಯಸ್ತವೇ

ಶಿವಾಂ ಗಿರಿತ್ರ ತಾಂ ಕುರು ಮಾ ಹಿ̐ಸೀಃ ಪುರುಷಂ ಜಗತ್ ೦೩.೦೬

 

ತತಃ ಪರಂ ಬ್ರಹ್ಮ ಪರಂ ಬೃಹನ್ತಂ ಯಥಾನಿಕಾಯಂ ಸರ್ವಭೂತೇಷು ಗೂಢಮ್

ವಿಶ್ವಸ್ಯೈಕಂ ಪರಿವೇಷ್ಟಿತಾರಮೀಶಂ ತಂ ಜ್ಞಾತ್ವಾಮೃತಾ ಭವನ್ತಿ ೦೩.೦೭

 

ವೇದಾಹಮೇತಂ ಪುರುಷಂ ಮಹಾನ್ತಮಾದಿತ್ಯವರ್ಣ್ಣಂ ತಮಸಃ ಪರಸ್ತಾತ್

ತಮೇವ ವಿದಿತ್ವಾತಿಮೃತ್ಯುಮೇತಿ ನಾನ್ಯಃ ಪನ್ಥಾ ವಿದ್ಯತೇಽಯನಾಯ ೦೩.೦೮

ಯಸ್ಮಾತ್ ಪರಂ ನಾಪರಮಸ್ತಿ ಕಿಂಚಿದ್ಯಸ್ಮಾನ್ನಾಣೀಯೋ ನ ಜ್ಯಾಯೋಽಸ್ತಿ ಕಶ್ಚಿತ್

ವೃಕ್ಷ ಇವ ಸ್ತಬ್ಧೋ ದಿವಿ ತಿಷ್ಠತ್ಯೇಕಸ್ತೇನೇದಂ ಪೂರ್ಣಂ ಪುರುಷೇಣ ಸರ್ವಮ್ ೦೩.೦೯

 

ತತೋ ಯದುತ್ತರತರಂ ತದರೂಪಮನಾಮಯಮ್

ಯ ಏತದ್ವಿದುರಮೃತಾಸ್ತೇ ಭವಂತ್ಯಥೇತರೇ ದುಃಖಮೇವಾಪಿಯನ್ತಿ ೦೩.೧೦

 

ಸರ್ವಾನನ ಶಿರೋಗ್ರೀವಃ ಸರ್ವಭೂತಗುಹಾಶಯಃ

ಸರ್ವವ್ಯಾಪೀ ಸ ಭಗವಾಂಸ್ತಸ್ಮಾತ್ ಸರ್ವಗತಃ ಶಿವಃ ೦೩.೧೧

 

ಮಹಾನ್ ಪ್ರಭುರ್ವೈ ಪುರುಷಃ ಸತ್ವಸ್ಯೈಷ ಪ್ರವರ್ತಕಃ

ಸುನಿರ್ಮಲಾಮಿಮಾಂ ಪ್ರಾಪ್ತಿಮೀಶಾನೋ ಜ್ಯೋತಿರವ್ಯಯಃ ೦೩.೧೨

 

ಅಙ್ಗುಷ್ಠಮಾತ್ರಃ ಪುರುಷೋಽನ್ತರಾತ್ಮಾ ಸದಾ ಜನಾನಾಂ ಹೃದಯೇ ಸನ್ನಿವಿಷ್ಠಃ

ಹೃದಾ ಮನೀಷಾ ಮನಸಾಭಿಕ್ಲೃಪ್ತೋ ಯ ಏತದ್ ವಿದುರಮೃತಾಸ್ತೇ ಭವಂತಿ ೦೩.೧೩

 

ಸಹಸ್ರಶೀರ್ಷಾ ಪುರುಷಃ ಸಹಸ್ರಾಕ್ಷಃ ಸಹಸ್ರಪಾತ್

ಸ ಭೂಮಿಂ ವಿಶ್ವತೋ ವೃತ್ವಾ ಅತ್ಯತಿಷ್ಠದ್ದಶಾಙ್ಗುಲಮ್ ೦೩.೧೪

 

ಪುರುಷ ಏವೇದ ಸರ್ವಮ್ ಯದ್ಭೂತಂ ಯಚ್ಚ ಭವ್ಯಮ್

ಉತಾಮೃತತ್ವಸ್ಯೇಶಾನಃ ಯದನ್ನೇನಾತಿರೋಹತಿ ೦೩.೧೫

 

ಸರ್ವತಃ ಪಾಣಿಪಾದಂ ತತ್ ಸರ್ವತೋಽಕ್ಷಿಶಿರೋಮುಖಂ

ಸರ್ವತಃ ಶ್ರುತಿಮಲ್ಲೋಕೇ ಸರ್ವಮಾವೃತ್ಯ ತಿಷ್ಠತಿ ೦೩.೧೬

 

ಸರ್ವೇನ್ದ್ರಿಯಗುಣಾಭಾಸಂ ಸರ್ವೇನ್ದ್ರಿಯವಿವರ್ಜ್ಜಿತಂ

ಸರ್ವಸ್ಯ ಪ್ರಭುಮೀಶಾನಂ ಸರ್ವಸ್ಯ ಶರಣಂ ಸುಹೃತ್ ೦೩.೧೭

 

 

ನವದ್ವಾರೇ ಪುರೇ ದೇಹೀ ಹಂಸೋ ಲೇಲಾಯತೇ ಬಹಿಃ

ವಶೀ ಸರ್ವಸ್ಯ ಲೋಕಸ್ಯ ಸ್ಥಾವರಸ್ಯ ಚರಸ್ಯ ಚ ೦೩.೧೮

 

ಅಪಾಣಿಪಾದೋ ಜವನೋ ಗ್ರಹೀತಾ ಪಶ್ಯತ್ಯಚಕ್ಷುಃ ಸ ಶೃಣೋತ್ಯಕರ್ಣ್ಣಃ

ಸ ವೇತ್ತಿ ವೇದ್ಯಂ ನ ಚ ತಸ್ಯಾಸ್ತಿ ವೇತ್ತಾ ತಮಾಹುರಗ್ರ್ಯಂ ಪುರುಷಂ ಮಹಾಂತಂ ೦೩.೧೯

 

ಅಣೋರಣೀಯಾನ್ ಮಹತೋ ಮಹೀಯಾನಾತ್ಮಾ ಗುಹಾಯಾಂ ನಿಹಿತೋಽಸ್ಯ ಜನ್ತೋಃ

ತಮಕ್ರತುಃ ಪಶ್ಯತಿ ವೀತಶೋಕೋ ಧಾತುಃ ಪ್ರಸಾದಾನ್ಮಹಿಮಾನಮೀಶಮ್ ೦೩.೨೦

 

ವೇದಾಹಮೇತಮಜರಂ ಪುರಾಣಂ  ಸರ್ವಾತ್ಮಾನಂ ಸರ್ವಗತಂ ವಿಭುತ್ವಾತ್

ಜನ್ಮನಿರೋಧಂ ಪ್ರವದನ್ತಿ ಯಸ್ಯ ಬ್ರಹ್ಮವಾದಿನೋ ಹಿ ಪ್ರವದನ್ತಿ ನಿತ್ಯಮ್ ೦೩.೨೧

 

 

*********

 

 

 

 

 


ಪರಿಶಿಷ್ಠ-ಅಧ್ಯಾಯ ೦೨

 

ಪರಿಶಿಷ್ಠ-ಅಧ್ಯಾಯ ೦೨

ಯಮ-ನಿಯಮಗಳು   

̐

ಧ್ಯಾನಕ್ಕೆ ತೊಡಗುವ ಮುನ್ನ ಅದಕ್ಕೆ ಪೂರಕವಾಗಿರುವ ಜೀವನಶೈಲಿಯೂ ಕೂಡಾ ನಮ್ಮದಾಗಿರಬೇಕು. ಇದನ್ನು ಯೋಗಶಾಸ್ತ್ರದಲ್ಲಿ ಯಮ-ನಿಯಮಗಳು ಎಂದು ಕರೆಯುತ್ತಾರೆ.   ‘ಯಮ’ ಎಂದರೆ ಅದು ನಾವು ಮಾಡಬಾರದ ಐದು ವಿಷಯಗಳು (೧) ಹಿಂಸೆ, (೨) ಸುಳ್ಳು ಹೇಳುವುದು,(೩) ಕದಿಯುವುದು,(೪) ಅತಿಯಾದ ಕಾಮ ಮತ್ತು (೫) ಇನ್ನೊಬ್ಬರ ಮುಂದೆ ಕೈಚಾಚುವುದು.  ಇವು ಭಗವಂತನ ಉಪಾಸನೆಯ ಮಾರ್ಗದಲ್ಲಿ ನಾವು ಬಿಡಬೇಕಾದ ಐದು ಪ್ರಮುಖ ವಿಷಯಗಳು. ಇನ್ನು ‘ನಿಯಮ ಎಂದರೆ ಅಧ್ಯಾತ್ಮ ಮಾರ್ಗದಲ್ಲಿ ನಾವು ಪಾಲಿಸಬೇಕಾದ ಐದು ನಿಯಮಗಳು. (೧) ಶೌಚ,  (೨) ತಪಸ್ಸು,  (೩) ತುಷ್ಟಿ, (೪) ಸ್ವಾಧ್ಯಾಯ ಮತ್ತು (೫) ಭಗವಂತನ ಪೂಜೆ. ಈ ಹತ್ತು ಯಮ-ನಿಯಮಗಳ ಸಂಕ್ಷಿಪ್ತ ವಿವರಣೆ ಇಲ್ಲಿದೆ:

ಅಹಿಂಸೆ:

ಇನ್ನೊಬ್ಬರಿಗೆ ತೊಂದರೆಯಾಗದಂತೆ ಬದುಕುವುದು ಅಹಿಂಸೆ. ಇಲ್ಲಿ ಅಹಿಂಸೆ ಎಂದರೆ ಕೇವಲ ಶಾರೀರಿಕವಾಗಿ ಮಾತ್ರವಲ್ಲ, ಮನಸ್ಸು ಮತ್ತು ಮಾತಿನಲ್ಲೂ ನಾವು ಅಹಿಂಸೆಯನ್ನು ಸಾಧಿಸಬೇಕು. ಉದಾಹರಣೆಗೆ: ಒಬ್ಬರನ್ನು ಚುಚ್ಚು ಮಾತಿನಿಂದ ಹಂಗಿಸುವುದು, ಮಾನಸಿಕವಾಗಿ ಇನ್ನೊಬ್ಬರನ್ನು ನಿಂದಿಸುವುದು ಅಥವಾ ಶಾಪ ಹಾಕುವುದು ಕೂಡಾ ಹಿಂಸೆ. ಕೆಲವೊಮ್ಮೆ ಹಿಂಸೆಯೇ ಅಹಿಂಸೆಯಾಗುತ್ತದೆ. ಉದಾಹರಣೆಗೆ: ಒಂದು ನರಭಕ್ಷಕ ಹುಲಿಯನ್ನು ಕೊಲ್ಲುವುದರಿಂದ ಊರಿನ ಅನೇಕ ಜನರ ಪ್ರಾಣ ಉಳಿಯುವುದಾದರೆ ಅದನ್ನು ಕೊಲ್ಲುವುದು ಅಹಿಂಸೆ. ದೊಡ್ಡ ಹಿಂಸೆಯನ್ನು ತಡೆಯುವುದಕ್ಕೋಸ್ಕರ ಮಾಡುವ ಚಿಕ್ಕ ಹಿಂಸೆ-ಅಹಿಂಸೆ. ನಾವು ನಮ್ಮ ಮಾತಿನಿಂದ, ಕೃತಿಯಿಂದ ಮತ್ತು ಮನಸ್ಸಿನಿಂದ ಇನ್ನೊಬ್ಬರಿಗೆ ಹಿಂಸೆಯಾಗದಂತೆ ನಡೆದುಕೊಳ್ಳಬೇಕು.

ಸತ್ಯ ಪರಿಪಾಲನೆ:

ಇದ್ದದ್ದನ್ನು ಇದ್ದಂತೆ ಹೇಳುವುದೇ ಸತ್ಯವಲ್ಲ. ಎಲ್ಲಿ ನಿಜವಾದ ಸಜ್ಜನಿಕೆ ಇದೇ-ಅದನ್ನು ಮೆಚ್ಚಿಕೊಂಡು, ಅದಕ್ಕೆ ಪೂರಕವಾಗಿ, ಇನ್ನೊಬ್ಬರನ್ನು  ನೋಯಿಸದೆ, ಅವರಿಗೆ ಹಿತವಾಗುವ ರೀತಿ ಮಾತನಾಡುವುದು ಮಾತಿನ ತಪಸ್ಸು. ಇನ್ನೊಬ್ಬರಿಗೆ ಪ್ರಿಯವೂ-ಹಿತವೂ ಆದ ಮಾತನ್ನು ಆಡುವುದು ಬಹಳ ಕಷ್ಟ. ಏಕೆಂದರೆ ಹೆಚ್ಚಿನ ಸಂದರ್ಭದಲ್ಲಿ ಪ್ರಿಯವಾದದ್ದು ಹಿತವಾಗಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಮೌನ ಲೇಸು. ಕೃಷ್ಣನ ಕಥೆಯನ್ನು ಓದುವಾಗ ಅನೇಕ ಕಡೆ ನಮಗೆ ಕೃಷ್ಣ ಸುಳ್ಳು ಹೇಳಿದಂತೆ, ಮೋಸ ಮಾಡಿದಂತೆ ಕಾಣಿಸುತ್ತದೆ. ಆದರೆ ಆ ಕ್ರಿಯೆಯ ಹಿಂದೆ ಇರುವ ಕಾರುಣ್ಯ, ಹಿತಚಿಂತನೆಯನ್ನು ಗಮನಿಸಿದಾಗ ನಮಗೆ ಅದು ಸುಳ್ಳಲ್ಲ ಎನ್ನುವುದು ತಿಳಿಯುತ್ತದೆ. ಮಾತನಾಡದೆ ಮೌನವಾಗಿದ್ದರೂ ಸರಿ-ಆದರೆ ಏನೋ ಮಾತನಾಡಿ ಆನಂತರ ಪಶ್ಚಾತ್ತಾಪಪಟ್ಟರೆ ಉಪಯೋಗವಿಲ್ಲ.

ಅಸ್ತೇಯ :

ಎಂದೂ ಕಳ್ಳತನ ಮಾಡಬೇಡ ಮತ್ತು ಪರರ ವಸ್ತುಗಳ ಮೇಲೆ ಅಪೇಕ್ಷೆ ಇಟ್ಟುಕೊಳ್ಳಬೇಡ.

ಬ್ರಹ್ಮಚರ್ಯ:

‘ಬ್ರಹ್ಮಚರ್ಯ ಎನ್ನುವ ಪದಕ್ಕೆ ಮುಖ್ಯವಾಗಿ ಮೂರು ಅರ್ಥಗಳಿವೆ. ಪರಬ್ರಹ್ಮನ ಕಡೆಗೆ ಹೋಗುವ ದೀಕ್ಷೆ-ಬ್ರಹ್ಮಚರ್ಯ; ನಿರಂತರ ವೇದಾಧ್ಯಯನ-ಬ್ರಹ್ಮಚರ್ಯ; ಲೈಂಗಿಕತೆಯಿಂದ ದೂರ ಸರಿಯುವ ಬ್ರಹ್ಮಚರ್ಯ. ಹೀಗಾಗಿ ಬ್ರಹ್ಮಚರ್ಯ ಪಾಲನೆ’ ಅಂದರೆ  ಮನಸ್ಸನ್ನು ಭಗವಂತನಲ್ಲಿ ನೆಲೆಗೊಳಿಸುವುದು, ಅದಕ್ಕೆ ಪೂರಕವಾಗಿ ವೇದಾಧ್ಯಯನ ಮಾಡುವುದು  ಹಾಗೂ ಅಧ್ಯಯನಕ್ಕೆ ಪೂರಕವಾಗಿ ದೈಹಿಕ ಬ್ರಹ್ಮಚರ್ಯ ಪಾಲನೆ ಮಾಡುವುದು. ದೈಹಿಕವಾಗಿ ಪೂರ್ಣ ಬ್ರಹ್ಮಚರ್ಯ ಕೇವಲ ಸನ್ಯಾಸಿಗಳಿಗೆ ಮತ್ತು ಬ್ರಹ್ಮಚಾರಿಗಳಿಗೆ ಅನ್ವಯಿಸುತ್ತದೆ. ಗಹಸ್ಥರಾದವರು ಈ ರೀತಿ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಗೃಹಸ್ಥರಲ್ಲಿ ಬ್ರಹ್ಮಚರ್ಯ ಪಾಲನೆ ಎಂದರೆ- ಅವರು ಸ್ವಚ್ಛಂದ ಕಾಮಿಗಳಾಗದೇ, ಗೃಹಸ್ಥಧರ್ಮ ಪಾಲನೆಯ ಆವರಣದಲ್ಲಿ ಬದುಕುವುದು ಎಂದರ್ಥ.

ಅಪರಿಗ್ರಹ:

ಅಗತ್ಯವಿಲ್ಲದೇ ಇನ್ನೊಬ್ಬರ ಮುಂದೆ ಕೈ ಒಡ್ಡಬೇಡ. ಕೊಟ್ಟರೆ ತೆಗೆದುಕೋ ಇಲ್ಲದಿದ್ದರೆ ಬೇಡ. ದೊಡ್ಡವರ ಮುಂದೆ ಕೈ ಜೋಡಿಸು (ಕೈ ಮುಗಿ), ಚಿಕ್ಕವರ ಮುಂದೆ ಕೈಯಿಂದ ಹರಸು. ಆದರೆ ಎಲ್ಲೂ ಅನಗತ್ಯ ಕೈ ಚಾಚಬೇಡ.

 ಶೌಚ:

ಶೌಚ ಎಂದರೆ ಶುಚಿತ್ವ. ಕನ್ನಡದಲ್ಲಿ ಶೌಚಮ್ ಎಂದರೆ ‘ಮಡಿ’. ನಾವು ಮಡಿ ಮಾಡುವುದನ್ನು ಬಿಟ್ಟು ಮಡಿಯಾಗುವುದನ್ನು ಕಲಿಯಬೇಕು. ಕೇವಲ ಸ್ನಾನ ಮಾಡಿ ಒದ್ದೆ ಬಟ್ಟೆ ಉಟ್ಟು ಯಾರನ್ನೂ ಮುಟ್ಟದೆ ಇದ್ದರೆ ಮಡಿಯಾಗಲು ಸಾಧ್ಯವಿಲ್ಲ.  ಶುಚಿ ಎನ್ನುವುದು ಮೂಲಭೂತವಾಗಿ ಮನಸ್ಸಿಗೆ ಸಂಬಂಧಪಟ್ಟದ್ದು. ಅದಕ್ಕೆ ಪೂರಕವಾಗಿ ನಾವು ದೇಹ-ಶುದ್ಧಿ ಮಾಡಿಕೊಳ್ಳಬೇಕು. ಪ್ರಾಪಂಚಿಕ ವಿಚಾರವನ್ನು ಮರೆತು, ಮನಸ್ಸನ್ನು ಭಗವಂತನಲ್ಲಿ ನೆಲೆ ನಿಲ್ಲಿಸುವುದು ಮಡಿ. ನಾವು ಕಾಯೇನ-ವಾಚಾ-ಮನಸಾ ಮಡಿಯಾಗಬೇಕು. ನಮ್ಮಲ್ಲಿ ಕೆಟ್ಟ ಯೋಚನೆ ಬಂದರೆ, ಕೆಟ್ಟ ಮಾತು ಬಾಯಲ್ಲಿ ಬಂದರೆ- ಆಗ  ನಾವು ಮೈಲಿಗೆ. ನಿಜವಾಗಿ ಕಾಯೇನ-ವಾಚಾ-ಮನಸಾ ಮಡಿಯಾಗಿರುವವ ಮೈಲಿಗೆಯವರೊಂದಿಗಿದ್ದರೆ  ಜೊತೆಗಿರುವವರೆಲ್ಲರೂ ಮಡಿಯಾಗಬಹುದು. ಇದನ್ನೇ ಹಿಂದೆ ‘ಪಂಕ್ತಿಪಾವನ’ ಎಂದು ಕರೆಯುತ್ತಿದ್ದರು. ಪೂರ್ಣ ಮಡಿಯಾಗಿರುವವ ಯಾವ ಪಂಕ್ತಿಯಲ್ಲಿ ಕುಳಿತನೋ ಆ ಪಂಕ್ತಿ ಮಡಿ. ಶಾಸ್ತ್ರಜ್ಞಾನವಿಲ್ಲದ ಮಡಿ ಮಡಿಯಲ್ಲ. ದೇವರ ಸ್ಮರಣೆ ಮನಸ್ಸಿನಲ್ಲಿ, ದೇವರ ನಾಮ ಬಾಯಿಯಲ್ಲಿ ಇದ್ದಾಗ ನಾವು ಮಡಿ.

ಮನಸ್ಸನ್ನು ಶುದ್ಧ ಮಾಡುವುದಕ್ಕೋಸ್ಕರ ಆಚಮನ ಮತ್ತು ಪ್ರಾಣಾಯಾಮ. “ಓ ಭಗವಂತಾನಿನ್ನ ಕಾರುಣ್ಯಧಾರೆಯಿಂದ ನನ್ನ ಸಹಸ್ರಾರದಿಂದ ಅಮೃತವನ್ನು ಕೆಳಕ್ಕೆ ಇಳಿಸಿ, ನನ್ನ ಇಡೀ ಮೈ ಪಾವನವಾಗುವಂತೆ ಮಾಡು, ನನ್ನೊಳಗಿನ ಎಲ್ಲಾ ಪಾಪಗಳೂ ಕೊಳೆಗಳೂ ಸುಟ್ಟು ತೊಳೆದುಹೋಗಲಿ” ಎನ್ನುವ ಅನುಸಂಧಾನದಿಂದಧ್ಯಾನಪೂರ್ವಕ ಪಾಪಪುರುಷ ನಿರಸನ ಮಾಡಬೇಕು. ಇಲ್ಲಿ ನಮ್ಮ ತಲೆಯಿಂದ ಅಮೃತಧಾರೆ ಇಳಿದು ಬರುವುದನ್ನು ನಾವು ಅನುಭವಿಸಬೇಕು(Feel it). ಪ್ರಾಣಾಯಾಮದಿಂದ ನಮ್ಮೊಳಗಿನ ಎಲ್ಲಾ ಕೊಳೆ ಸುಟ್ಟು ಹೋಗುತ್ತದೆ. ನಮ್ಮ ಅಂಗಾಂಗದಲ್ಲಿ ಕೂತ ಭಗವಂತನ ಸ್ಮರಣೆಯೇ ಆಚಮನ. “ಓ ನೀರೇ, ನೀನು ಸುಖದ ಸೆಲೆ, ನೀನು ಸುಖದ ನೆಲೆ, ನಿನ್ನನ್ನು ಪ್ರೋಕ್ಷಿಸಿಕೊಳ್ಳುತ್ತಿದ್ದೇನೆ. ಆ ಭಗವಂತ ನನ್ನಲ್ಲಿ ಬಂದು ನೆಲೆಸುವಂತೆ ಮಾಡು” ಎಂದು ಪ್ರಾರ್ಥಿಸಿ ಪ್ರೋಕ್ಷಣೆಮಾಡಿಕೊಳ್ಳಬೇಕು. ಇದೆಲ್ಲವನ್ನೂ ನಾವು ತಿಳಿದು ಮಾಡಿದಾಗ ಮಾತ್ರ  ಮಡಿಯಾಗುತ್ತೇವೆ. ದೇವರನ್ನು ನೆನೆಯುವುದೇ ಮಡಿ. ದೇವರನ್ನು ಮರೆಯುವುದೇ ಮೈಲಿಗೆ. ಪುಂಡರೀಕಾಕ್ಷನ ಸ್ಮರಣೆ ಇಲ್ಲದೆ, ಅಂತರಂಗ ಶುದ್ಧಿ ಅಸಾಧ್ಯ.

ತಪಸ್ಸು:

ತಪಸ್ಸು ಮಾಡಲು ಕಾಡಿಗೆ ಹೋಗಬೇಕಾಗಿಲ್ಲ. ಮನೆಯಲ್ಲೇ ಇದ್ದು ತಪಸ್ಸು ಮಾಡಬಹುದು. ಶರೀರ, ಮಾತು ಮತ್ತು ಮನ ಎನ್ನುವ ಮೂಲಭೂತವಾದ ಮೂರು ಬಗೆಯ ತಪಸ್ಸನ್ನು ಶ್ರೀಕೃಷ್ಣ ಗೀತೆಯಲ್ಲಿ( ಅಧ್ಯಾಯ ೧೭) ವರ್ಣಿಸಿರುವುದನ್ನು ಕಾಣುತ್ತೇವೆ. ದೇವತೆಗಳನ್ನು, ದ್ವಿಜರನ್ನು(ಅರಿವಿನಿಂದ ಮರುಹುಟ್ಟು ಪಡೆದವರನ್ನು), ಗುರುಗಳನ್ನು ಮತ್ತು ತುಂಬಾ ತಿಳಿದವರನ್ನು ಗೌರವಿಸುವುದು, ನೈರ್ಮಲ್ಯ, ನೇರ ನಡೆ, ಬ್ರಹ್ಮಚರ್ಯ ಮತ್ತು ಇನ್ನೊಬ್ಬರಿಗೆ ಕಾಟ ನೀಡದಿರುವುದು ಶರೀರದ ತಪಸ್ಸು ಎನಿಸುತ್ತದೆ. ಕೆರಳಿಸದ, ದಿಟವಾದ, ಕೇಳುವುದಕ್ಕೆ ಮೆಚ್ಚಾದ ಹಾಗೂ ಬಾಳಿಗೆ ಒಳಿತಾದ ಮಾತು ಮತ್ತು ಶಾಸ್ತ್ರಗಳ ಓದು, ಮಾತಿನ ತಪಸ್ಸು ಎನಿಸುತ್ತದೆ. ಬಗೆಯ ತಿಳಿ, ಮಿದುತನ, ಮನನ, ತನ್ನ ಮೇಲೆ ಹಿಡಿತ ಮತ್ತು ಒಳ್ಳೆಯದನ್ನೇ ಬಗೆಯುವುದು-ಇದು ಮನದ ತಪಸ್ಸು ಎನಿಸುತ್ತದೆ. ಯಾವುದೇ ಒಂದು ವಿಷಯದ ಮೇಲೆ ತೀರ್ಮಾನಕ್ಕೆ ಬರುವ ಮೊದಲು ಆಳವಾದ ಚಿಂತನೆ ಮಾಡಬೇಕು. ಒಂದು ವಿಷಯದ ಮೇಲೆ, ಒಬ್ಬ ವ್ಯಕ್ತಿಯ ಮೇಲೆ ದುಡುಕಿ ಪ್ರತಿಕ್ರಿಯಿಸಬಾರದು. ಮನನ ಮಾಡು, ಮನನ ಮಾಡಿ ಮಾತನಾಡು. ಈ ರೀತಿ ಮನನ ಮಾಡಬೇಕಾದರೆ ನಾವು ಇಂದ್ರಿಯ ನಿಗ್ರಹವನ್ನು ಸಾಧಿಸಬೇಕು.  ಸ್ವಚ್ಛವಾದ, ಕ್ರೌರ್ಯವಿಲ್ಲದ ಮನಸ್ಸಿಗೆ ಇಂದ್ರಿಯಗಳ ಹಿಡಿತವಿರುತ್ತದೆ. ಅಂತಹ ಮನಸ್ಸಿಗೆ  ಕೆಟ್ಟ ಭಾವನೆ ಹೊಳೆಯುವುದಿಲ್ಲ. ಒಬ್ಬರು ನಮ್ಮ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದರೂ ಕೂಡಾ ನಮಗೆ ಅವರ ಮೇಲೆ ದ್ವೇಷ, ಕೋಪ ಬರುವುದಿಲ್ಲ. ಈ ರೀತಿ ಮನಸ್ಸಿನ ನಿಯಂತ್ರಣ ಮಾಡುವುದು  ಮನಸ್ಸಿನ ತಪಸ್ಸಾಗುತ್ತದೆ.

ತುಷ್ಟಿ(contentment):

ಇದ್ದುದರಲ್ಲೇ ಅಥವಾ  ದೊರೆತುದರಲ್ಲೇ ತೃಪ್ತಿಯನ್ನು ಕಾಣುವ ಗುಣ ತುಷ್ಟಿ. ನಿನ್ನ ಜೀವನದಲ್ಲಿ ಹೀಗೇ ಆಗಬೇಕು, ಹೀಗೇ ಮಾಡಬೇಕು, ಅದರಿಂದ ಇಂತಹದ್ದೇ ಸಿಗಬೇಕು ಅನ್ನುವ ಬಯಕೆ, ಆಸೆಗಳನ್ನು ಬಿಟ್ಟು  ನಿರಾಳವಾಗಿ ಕರ್ತವ್ಯ ಮಾಡು. ಭಗವಂತ ಏನು ಕೊಡುತ್ತಾನೋ ಅದನ್ನು ಪ್ರಸಾದವಾಗಿ ಸ್ವೀಕರಿಸು. ಏನು ಬಂತೋ ಅದರಲ್ಲಿ ತೃಪ್ತಿಪಡುವುದನ್ನು ಕಲಿ. ಇಲ್ಲವಲ್ಲಾ ಎಂದು ಕೊರಗಬೇಡ. ಇದು  'ಕಾಮಸಂಕಲ್ಪವರ್ಜ್ಯ'. (ಏನೂ ಬೇಡ ಎಂದು ಬಯಸುವುದಲ್ಲ, ಇಂಥದ್ದೇ ಬೇಕು ಎಂದು ಬಯಸದೇ ಇರುವುದು). ಏನು ಬಂತೋ ಬರಲಿ, ನೀನು ಪ್ರಯತ್ನಶೀಲನಾಗು. ಬಂದದ್ದರಲ್ಲಿ ಸಂತೋಷದಿಂದ ಬದುಕು. ಇಂತಹ ಅರಿವಿನಿಂದ ಮಾಡಿದ ಕರ್ಮ ಸ್ವಚ್ಛವಾಗಿರುತ್ತದೆ. ಇದು ಕರ್ಮದ ಕೊಳೆ ಅರಿವಿನ ಬೆಂಕಿಯಿಂದ ಸ್ವಚ್ಛವಾಗುವಿಕೆ. ಇಂತಹ ನಡೆ ಉಳ್ಳವನು ಪಂಡಿತ ಎನಿಸುತ್ತಾನೆ. ಇಂತವನನ್ನು ಜ್ಞಾನಿಗಳು ‘ಜ್ಞಾನಿ’  ಎಂದು ಗುರುತಿಸುತ್ತಾರೆ. ಮನುಷ್ಯ ಏನನ್ನು  ಹೇಳುತ್ತಾನೋ ಅದು ಮುಖ್ಯವಲ್ಲ, ಏನನ್ನು ರೂಢಿಸಿಕೊಳ್ಳುತ್ತಾನೋ ಅದು ಮುಖ್ಯ. ಮನಸ್ಸಿನ ತುಂಬಾ ಆಸೆಗಳನ್ನು ತುಂಬಿಕೊಂಡು ಯಾವುದ್ಯಾವುದೋ ಆಸೆಯ ಬೆನ್ನುಹತ್ತಿ, ಸೋಗು ಹಾಕಿಕೊಂಡು ಬದುಕುವವನು ಎಂದೂ ಎತ್ತರಕ್ಕೇರಲಾರ.    

ರಜೋಗುಣದ ಪ್ರಭಾವಕ್ಕೊಳಗಾದಾಗ ವ್ಯಕ್ತಿ ಸದಾ ಯಾವುದ್ಯಾವುದೋ ಪ್ರವೃತ್ತಿಯನ್ನು ಮಾಡ ಬಯಸುತ್ತಾನೆ. ದುಡ್ಡು ಮಾಡುವುದಕ್ಕಾಗಿ ಬಗೆಬಗೆಯ ವ್ಯವಹಾರಗಳು; ಎಷ್ಟು ತೊಡಗಿಸಿಕೊಂಡರೂ ಅಲ್ಲಿ ಅತೃಪ್ತಿ; ತಾನು ಮಾಡುವ ವ್ಯವಹಾರದಲ್ಲಿ ದೇವರು ತನಗೆ ಹೊಟ್ಟೆ ಬಟ್ಟೆಗಾಗುವಷ್ಟು ಕೊಟ್ಟರೂ ಕೂಡಾ ಅಲ್ಲಿ ತೃಪ್ತಿ ಇರುವುದಿಲ್ಲ. ಆಸುರೀ ಸ್ವಭಾವದವರ ಬಯಕೆಗೆ ಕೊನೆ ಇರುವುದಿಲ್ಲ. ಎಷ್ಟು ಬಂದರೂ ಇನ್ನಷ್ಟರಾಸೆ. ಉದಾಹರಣೆಗೆ ಕೆಲಸವೇ ಇಲ್ಲದಾಗ ಒಂದು ಕೆಲಸದ ಆಸೆ, ಕೆಲಸ ಸಿಕ್ಕಿದಾಗ ಹೆಚ್ಚು ಸಂಬಳದ ಆಸೆ, ಸಂಬಳ ಬಂದಾಗ ಆ ಸಂಬಳ ತನ್ನ ಪಕ್ಕದ ಮನೆಯವನಿಗಿಂತ ಕಡಿಮೆ-ಅದಕ್ಕಾಗಿ ಇನ್ನೂ ಹೆಚ್ಚಿನ ಸಂಬಳದ ಆಸೆ, ದೊಡ್ಡ ಹುದ್ದೆಯ ಆಸೆ, ಹೀಗೆ ಎಷ್ಟು ಸಿಕ್ಕಿದರೂ ತೃಪ್ತಿ ಇಲ್ಲ. ಈ ದಾಹವನ್ನು ಪೂರೈಸಲು ಸಾಧ್ಯವೇ ಇಲ್ಲ. ಪುರಾಣದಲ್ಲಿ ಹೇಳುವಂತೆ ಹೇಗೆ ಪಾತಾಳವನ್ನು ಮಣ್ಣುಹಾಕಿ ಮುಚ್ಚಲು ಸಾಧ್ಯವಿಲ್ಲವೋ ಹಾಗೇ ಮನುಷ್ಯನ ಬಯಕೆಯನ್ನು ಪೂರೈಸಲು ಸಾಧ್ಯವಿಲ್ಲ. ನಮಗೆ ಎಷ್ಟೇ ಹಣ ಸಿಕ್ಕಿದರೂ ಕೂಡಾ ನಾವು ಅದರ ಬಲಬದಿಯಲ್ಲಿ ಒಂದು ಸೊನ್ನೆ ಸೇರಿಸಿಕೊಂಡು ಕಡಿಮೆಯಾಯಿತು ಎಂದು ಕೊರಗುತ್ತೇವೆ ಮತ್ತು ಸಂತೋಷವನ್ನು ಮರೆಯುತ್ತೇವೆ. ಕಠೋಪನಿಷತ್ತಿನಲ್ಲಿ- “ನಿನಗೆ ಎಷ್ಟು ಬೇಕೋ ಅಷ್ಟು ಧನವನ್ನು ಕೊಡುತ್ತೇನೆ” ಎಂದು ಯಮ ಹೇಳಿದಾಗ, ನಚಿಕೇತ ಹೇಳುತ್ತಾನೆ: “ನ ವಿತ್ತೇನ ತರ್ಪಣೀಯೋ ಮನುಷ್ಯಃ” ಎಂದು. ಅಂದರೆ “ಮನುಷ್ಯನ ಧನದ ಬಯಕೆಯನ್ನು ಪೂರೈಸಲು ಯಾರಿಂದಲೂ ಸಾಧ್ಯವಿಲ್ಲ” ಎಂದರ್ಥ. ಸಾಕು ಎನ್ನುವುದು ದೈವೀ ಸ್ವಭಾವ, ಬೇಕು ಎನ್ನುವುದು ಆಸುರೀ ಸ್ವಭಾವ. ಹೀಗೆ ಆಸುರೀ ಸ್ವಭಾವದವರು ಬಯಕೆಗಳ ಬೆನ್ನುಹತ್ತಿ, ಆ ತೀರದ ಬಯಕೆಯನ್ನು ತೀರಿಸಿಕೊಳ್ಳುವುದಕ್ಕೋಸ್ಕರ ಮಾಡಬಾರದ್ದನ್ನು ಮಾಡುತ್ತಾರೆ. ಇವರ ಜೀವನವೇ ಡಂಭಾಚಾರ. ಬಿಗುಮಾನ, ದುರಹಂಕಾರ, ನಾಟಕೀಯವಾದ ಬದುಕಿನಿಂದ ಇನ್ನೊಬ್ಬರಿಗೆ ಮೋಸ ಮಾಡುವುದು. ಹೀಗೆ ನಡೆ ನುಡಿಯಲ್ಲಿ ಸ್ವಚ್ಛತೆ ಇಲ್ಲದ ಕೊಳಕು ಬದುಕು ಇವರದ್ದಾಗಿರುತ್ತದೆ. ಹೀಗಾಗಿ ಜೀವನದಲ್ಲಿ ಭಗವಂತ ಕೊಟ್ಟಿರುವುದರಲ್ಲಿ ತೃಪ್ತಿಯಿಂದ ಬದುಕಲು ನಾವು ಅಭ್ಯಾಸ ಮಾಡಿಕೊಳ್ಳಬೇಕು.

 

ಸ್ವಾಧ್ಯಾಯ :

ಮೂರು ತರಹದಲ್ಲಿ ಸ್ವಾಧ್ಯಾಯವಿದೆ. ಸ್ವತಂತ್ರನಾದ ಭಗವಂತನ ಬಗೆಗೆ ಇರತಕ್ಕಂತಹ ಸಮಗ್ರ ವೇದಗಳ ಅಧ್ಯಯನ-ಸ್ವಾಧ್ಯಾಯ; ಇದು ಸಾಧ್ಯವಾಗದೇ ಇದ್ದರೆ ಅವರವರ ಶಾಖೆಯ(ಸ್ವಂ) ವೇದಾಧ್ಯಯನ.  ಇದನ್ನು ಕೂಡಾ ಸ್ವಾಧ್ಯಾಯ ಎನ್ನುತ್ತಾರೆ. ಇನ್ನು ಮೂರನೆಯದು ನಾವು ಗುರುಗಳಿಂದ ಕೇಳಿದ ಅಧ್ಯಾತ್ಮ ವಿಚಾರವನ್ನು ನಿರಂತರ ಮನನ ಮಾಡಿ, ಸ್ವಪ್ರವಚನ ಮಾಡಿಕೊಂಡು, ನಮ್ಮ ಆತ್ಮಕ್ಕೆ ಆ ವಿಚಾರ ತಿಳಿದ ಮೇಲೆ ಇನ್ನೊಬ್ಬರಿಗೆ ಹೇಳಬೇಕು.

ಭಗವಂತನ ಪೂಜೆ:

ಜೀವನದ ಪ್ರತಿಯೊಂದು ಕ್ರಿಯೆಯನ್ನೂ ಭಗವಂತನ ಪೂಜೆ ಎಂದು ಮಾಡು.

******************